ಗುಜರಾತ್ ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆ; ಯು.ಟಿ.ಖಾದರ್
ಮಂಗಳೂರು: ಗುಜರಾತ್ ಚುನಾವಣೆ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸತ್ಯಕ್ಕೆ ಜಯ ಸಿಗುತ್ತದೆ ಎಂಬುದನ್ನು ಗುಜರಾತ್ ಫಲಿತಾಂಶ ತೋರಿಸಿಕೊಟ್ಟಿದೆ. ಸತತ 22 ವರ್ಷಗಳಿಂದ ಗುಜರಾತಿನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ 30 ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳನ್ನು ಸ್ವತಹ ಮೋದಿಯವರು ನಡೆಸಿದರೂ ಕೂಡ ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ಪಡೆಯುವುದನ್ನು ಬಿಜೆಪಿಗೆ ತಪ್ಪಿಸಲು ಸಾಧ್ಯವಾಗಲಿಲ್ಲ. ಜನತ ಯಾವುದೇ ತಂತ್ರಗಾರಿಕೆಗೆ ಮಾರು ಹೋಗಿ ಮತ ಹಾಕುವುದಿಲ್ಲ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಏನೇ ಬಂದರೂ ಜನ ನಂಬುವುದಿಲ್ಲ ಎಂದರು.
ಹಿಮಾಚಲ ಪ್ರದೇಶದಲ್ಲಿ ಜನರ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ರಾಹುಲ್ ಗಾಂದಿ ಅಧಿಕಾರ ವಹಿಸಿಕೊಂಡ ಬಳಿಕ ದೇವರು ಮತ್ತು ಜನರ ಆಶೀರ್ವಾದ ಆರಂಭದಿಂದಲೇ ಅವರಿಗೆ ದೊರಕಿದ್ದು, ಮುಂದೆ ಅವರು ದೇಶದ ಪ್ರಧಾನಿಯಾಗಿ ಆಯ್ಕೆಯಾಗಲಿದ್ದರೆ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು.
ಜೆಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲಾಂವಂತೆ