ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ ಪ್ರತಿಭಾ ಪುರಸ್ಕಾರ

Spread the love

ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ ಪ್ರತಿಭಾ ಪುರಸ್ಕಾರ

ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ನಂದಿನಿ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾಕ್ಟರ್ ನೆಲ್ಕುದ್ರಿ ಸದಾನಂದ, ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆ ಯನ್ನು ಉದ್ದೇಶಿಸಿ ಮಾತನಾಡುತ್ತಾ ಇಂದು ಸರಕಾರಿ ನೌಕರರ ಮಕ್ಕಳು ಅತ್ಯಧಿಕ ಪ್ರಮಾಣದಲ್ಲಿ ಅಂಕಗಳನ್ನು ಗಳಿಸಿ ಓದಿನಲ್ಲಿ ಮುಂದೆ ಇರುವುದು ಸಂತಸದ ವಿಷಯ. ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಾಳಗಬೇಕು.ನೈತಿಕವಾಗಿ ಕುಟುಂಬದ ಜೊತೆಗೆ ಬೆರೆತು ಎಲ್ಲರೊಂದಿಗೂ ಹೊಂದಿಕೊಂಡು ಹೋಗಬೇಕು. ಸಮಾಜದಲ್ಲಿ ಸತ್ಪ್ರಜೆಗಳಾಗಬೇಕು ಎಂದು ಕಿವಿ ಮಾತು ಹೇಳಿದರು.

ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಇದೆ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಶ್ರೀ ಶ್ರೀನಿವಾಸ್. ಟಿ.,ರಾಜ್ಯ ಪ್ರಧಾನ ಕಾರ್ಯದರ್ಶಿ, ಶ್ರೀ ಸಿದ್ದೇಶ್, ರಾಜ್ಯ ಉಪಾಧ್ಯಕ್ಷರು, ಶ್ರೀ ಎಚ್ ಗಣೇಶ್ ರಾವ್, ಜಿಲ್ಲಾಧ್ಯಕ್ಷರು, ದ.ಕನ್ನಡ ಸರ್ಕಾರಿ ನೌಕರರ ಸಂಘ, ಶ್ರೀ ಪಿ.ಕೆ. ಕೃಷ್ಣ ನಿಕಟ ಪೂರ್ವ ಜಿಲ್ಲಾಧ್ಯಕ್ಷರು, ಶ್ರೀ ನವೀನ್ ಕುಮಾರ್ ಎಂ ಎಸ್, ಜಿಲ್ಲಾ ಖಜಾಂಚಿ ಮತ್ತು ತಾಲೂಕು ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಮೊದಲು ಸರಕಾರಿ ನೌಕರರಿಗೆ ಒತ್ತಡ ನಿರ್ವಹಣೆ ಬಗ್ಗೆ ಡಾ.ಬಿಂದು ಉದಯಕುಮಾರ್ ಅವರಿಂದ ಕಾರ್ಯಗಾರ ನಡೆಯಿತು.


Spread the love
Subscribe
Notify of

0 Comments
Inline Feedbacks
View all comments