ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಧರ್ಮಸ್ಥಳ ಪೊಲೀಸರು ಗುರುವಾರ ಬಂಧಿಸಿದ್ದಾರೆ
ಬಂಧಿತರನ್ನ ಲಾರಿಯ ಚಾಲಕ ನರೇಶ್ ಮತ್ತು ಆತನೊಂದಿಗೆ ಇದ್ದ ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್ ಹಫೀಜ್ ಬಿನ್ ಮಹಮ್ಮದ್ ಇಬ್ರಾಹಿಂ ಎಂದು ಗುರುತಿಸಲಾಗಿದೆ
ದಿನಾಂಕ; 25.6.2020 ರಂದು ಬೆಳಿಗ್ಗೆ ಸುಮಾರು 7.00 ಗಂಟೆಯ ಸಮಯಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಚಾರ್ಮಾಡಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಿಮಿತ್ತ ಚಿಕ್ಕಮಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಕೆಎ-16-ಸಿ-2426 ನೇದನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಸದ್ರಿ ವಾಹನದಲ್ಲಿ ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲಾತಿಗಳನ್ನು ಹೊಂದದೇ ಸಾಧಾರಣ ಗಾತ್ರದ 5 ಎಮ್ಮೆ, 4 ಹಸುಗಳು ಮತ್ತು 2 ಸಣ್ಣ ಕರು ಸೇರಿ ಒಟ್ಟು 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ಕಂಡು ಬಂದಿದ್ದು, ಸದರಿ ವಾಹನದಲ್ಲಿದ್ದ ಲಾರಿಯ ಚಾಲಕ ನರೇಶ್ ಮತ್ತು ಆತನೊಂದಿಗೆ ಇದ್ದ ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್ ಹಫೀಜ್ ಬಿನ್ ಮಹಮ್ಮದ್ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆದು, ಲಾರಿ ಸಹಿತ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 5,7,9,11 ಕರ್ನಾಟಕ ಗೋ ಹತ್ಯೆ ನಿಷೇದ ಕಾಯ್ದೆ ಮತ್ತು ಜಾನುವಾರು ಸರಂಕ್ಷಣಾ ಕಾಯ್ದೆ -1964 ಜೊತೆಗೆ ಕಲಂ:34 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ