Spread the love
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನಗಳ ಪತ್ತೆ
ಮಂಗಳೂರು: ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ರೂ ಐವತ್ತು ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡ ಘಟನೆ ನಡೆದಿದೆ
ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ. ರವರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಪಡೀಲ್ ಜಂಕ್ಷನ್ ಮತ್ತು ಪಂಪುವೆಲ್ ರಾ.ಹೆ. ಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ಟಿಪ್ಪರ್ ಲಾರಿಗಳಲ್ಲಿ ಅಕ್ರಮವಾಗಿ ಮರಳುಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ್ದು, ಸ್ವಾಧೀನಪಡಿಸಿಕೊಂಡಿರುವ ಮರಳು ಹಾಗೂ ಟಿಪ್ಪರ್ ವಾಹನದ ಅಂದಾಜು ಒಟ್ಟು ಮೌಲ್ಯ ರೂ. 50,00,000/- ಆಗಿರುತ್ತದೆ. ಮುಂದಿನ ಸೂಕ್ತ ಕ್ರಮಕ್ಕಾಗಿ ಉಪ-ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಂಗಳೂರು ರವರಿಗೆ ಹಸ್ತಾಂತರಿಸಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರ ನಿರ್ದೇಶನದಂತೆ, ಡಿ.ಸಿ.ಪಿ.(ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ ಎ.ಸಿ.ಪಿ. ಶ್ರೀ ಕೆ.ರಾಮರಾವ್ ರವರು, ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿಗಳು ಹಾಗೂ ಕಂಕನಾಡಿ ನಗರ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ಪತ್ತೆಯಲ್ಲಿ ಭಾಗವಹಿಸಿರುತ್ತಾರೆ.
Spread the love