Home Mangalorean News Kannada News ಅಕ್ರಮ ಮರಳುಗಾರಿಕೆ ವಿಚಾರ – ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಮಾಹಿತಿ ನೀಡದ ನಾಯಕರ ವಿರುದ್ದ ಪ್ರಖ್ಯಾತ್ ಶೆಟ್ಟಿ,...

ಅಕ್ರಮ ಮರಳುಗಾರಿಕೆ ವಿಚಾರ – ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಮಾಹಿತಿ ನೀಡದ ನಾಯಕರ ವಿರುದ್ದ ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್ ಇತರರು ಗರಂ

Spread the love

ಅಕ್ರಮ ಮರಳುಗಾರಿಕೆ ವಿಚಾರ – ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಮಾಹಿತಿ ನೀಡದ ನಾಯಕರ ವಿರುದ್ದ ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್ ಇತರರು ಗರಂ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಾಯಕರೊಳಗೆ ಪರಸ್ಪರ ಮುಸುಕಿನ ಗುದ್ದಾಟ ನಡೆಯುತ್ತಿದ್ದ ಅದು ಶುಕ್ರವಾರ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರ ಭೇಟಿಯ ವೇಳೆ ಬಹಿರಂಗಗೊಂಡಿದೆ. ಪಕ್ಷದ ಪ್ರಮುಖ ನಾಯಕರು ಜಿಲ್ಲೆಯ ಸ್ವರ್ಣ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿಚಾರದಲ್ಲಿ ಕಾರ್ಯಾಧ್ಯಕ್ಷರಿಗೆ ಮಾಹಿತಿ ನೀಡದ ವಿಚಾರದಲ್ಲಿ ಪಕ್ಷದ ಕೆಲವೊಂದು ನಾಯಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಅದಲ್ಲದೆ ಸ್ವರ್ಣ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸತತ ಹೋರಾಟ ನಡೆಸಿಕೊಂಡು ಬರುತ್ತಿದ್ದು ಈ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಹಾಗೂ ಮಾಧ್ಯಮಗೊಷ್ಠೀಯಲ್ಲಿ ಕಾರ್ಯಾಧ್ಯಕ್ಷರಿಗೆ ಮನವರಿಕೆ ಮಾಡಲು ಜಿಲ್ಲಾ ಕಾಂಗ್ರೆಸ್ ಹಾಗೂ ಇತರ ಪ್ರಮುಖ ನಾಯಕರು ಸೂಕ್ತ ರೀತಿಯಲ್ಲಿ ಮನವರಿಕೆ ಮಾಡಲು ಸೋತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ನಗರಸಭಾ ಸದಸ್ಯ ರಮೇಶ್ ಕಾಂಚನ್, ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಯತೀಶ್ ಕರ್ಕೇರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ನಡೆದಿರುವ ಈ ಹಗರಣದ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನವರು ಟ್ವೀಟ್ ಮೂಲಕ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ಜಿಲ್ಲಾ ಕಾಂಗ್ರೆಸ್ ಈ ವಿಚಾರದಲ್ಲಿ ತಮ್ಮ ಗಮನಕ್ಕೆ ತಾರದೆ ಇರುವುದು ನಿಜಕ್ಕೂ ಬೇಸರದ ಸಂಗತಿ. ತಾವು ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದು ವಿಧಾನಸಭೆಯಲ್ಲಿ ಹಗರಣದ ಕುರಿತು ಪ್ರಸ್ತಾಪ ಮಾಡುವಂತೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್ ಅವರು ತನಗೆ ಇದರ ಬಗ್ಗೆ ಮಾಹಿತಿ ಇಲ್ಲವಾಗಿದ್ದು ಸಂಪೂರ್ಣ ಮಾಹಿತಿಯನ್ನು ಪುನಃ ವಾಪಾಸು ಕಾಂಗ್ರೆಸ್ ಕಚೇರಿಗೆ ಬಂದು ಅವರೇ ಸ್ವತಃ ನಾಯಕರಿಗೆ ಸಮಾಧಾನ ಪಡಿಸಿದ್ದಲ್ಲದೆ ಮರಳುಗಾರಿಕೆ ವಿಚಾರದಲ್ಲಿ ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್ ಹಾಗೂ ಇತರರಿಂದ ಪಡೆದುಕೊಂಡರು.

ಬಳಿಕ ಮಾತನಾಡಿದ ಸಲೀಂ ಅಹ್ಮದ್ ಈ ಹಗರಣದ ಬಗ್ಗೆ ರಾಜ್ಯ ಮಟ್ಟದಲ್ಲಿ ರಾಜ್ಯ ಅಧ್ಯಕ್ಷರ ಗಮನಕ್ಕೆ ತಂದು ವಿಧಾನ ಸಭೆಯಲ್ಲಿ ಪ್ರಸ್ತಾಪ ಮಾಡಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಹಾಗೂ ಇತರರು ಈ ವೇಳೆ ಉಪಸ್ಥಿತರಿದ್ದರು


Spread the love

Exit mobile version