Home Mangalorean News Kannada News ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

Spread the love

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಆರು ದಿನಗಳ ವಾರ್ಷಿಕ ಮಹೋತ್ಸವಕ್ಕೆ ರವಿವಾರ ಸಂಭ್ರಮದ ಚಾಲನೆ ದೊರೆಯಿತು.

ಸ್ಥಳೀಯ ಮುಖಂಡರಾಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಯವರ ಮಹೋತ್ಸವದ ಆಚರಣೆಯ ಉದ್ಘಾಟನಾ ಕಾರ್ಯದಲ್ಲಿ ಭಾಗವಹಿಸಿ ಶುಭಹಾರೈಸಿದರು. ಬಳಿಕ ಮಹೋತ್ಸವ ಬಲಿಪೂಜೆಗಳಿಗೆ ಚಾಲನೆ ದೊರೆಯಿತು.

ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಚರ್ಚಿನ ಪ್ರಧಾನ ಧರ್ಮಗುರು ವಂ|ಆಲ್ಬನ್ ಡಿಸೋಜಾ, ಸಹಾಯಕ ಧರ್ಮಗುರು ವಂ |ಲ್ಯಾರಿ ಪಿಂಟೊ, ಆಧ್ಯಾತ್ಮಿಕ ನಿರ್ದೇಶಕರಾದ ವಂ|ರೋಮನ್ ಮಸ್ಕರೇನ್ಹಸ್, ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಶ್ ಡಿಸಿಲ್ವಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಹೋತ್ಸವದ ಪ್ರಥಮ ದಿನ ಬೆಳಿಗ್ಗೆ 7.30ಕ್ಕೆ ಮೊದಲ ಬಲಿಪೂಜೆಯೊಂದಿಗೆ ಆರಂಭವಾಗಿದ್ದು ರಾತ್ರಿ 8 ಗಂಟೆಯ ವರೆಗೆ ಒಟ್ಟು 8 ಬಲಿಪೂಜೆಗಳು ನಡೆಯಲಿವೆ. ಸಂಜೆ 4.30ಕ್ಕೆ ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ|ವಂ|ಡಾ| ಎಲೋಶಿಯಸ್ ಪಾವ್ಲ್ ಡಿಸೋಜಾ ಹಬ್ಬದ ವಿಶೇಷ ಬಲಿಪೂಜೆಯನ್ನು ನೆರವೇರಿಸಲಿದ್ದಾರೆ.

ಭ್ರಾತೃತ್ವದ ಪೂಜೆ ಹಾಗೂ ಪರಮ ಪ್ರಸಾದ ಮೆರವಣಿಗೆ


ಶನಿವಾರ  ವಾರ್ಷಿಕ ಮಹೋತ್ಸವದ ಪೂರ್ವ ತಯಾರಿಯಾಗಿ ಭ್ರಾತೃತ್ವದ ದಿನವನ್ನಾಗಿ ಆಚರಿಸಲಾಗಿದ್ದು ನಕ್ರೆ ಚರ್ಚಿನ ಪ್ರಧಾನ ಧರ್ಮಗುರು ವಂ|ಲೂವಿಸ್ ಡೆಸಾ ಪವಿತ್ರ ಬಲಿಪೂಜೆಯನ್ನು ನೆರವೇರಿಸಿರು. ಬಳಿಕ ಪರಮ ಪ್ರಸಾದದ ಮೆರವಣಿಗೆ ಜರುಗಿತು. ಈ ವೇಳೆ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.


Spread the love

Exit mobile version