Home Mangalorean News Kannada News ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕಳ; ಆರೋಪಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕಳ; ಆರೋಪಿಯ ಬಂಧನ

Spread the love

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕಳ; ಆರೋಪಿಯ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ಪಿಲಾತಬೆಟ್ಟು ಗ್ರಾಮದ ನಯನಾಡಿ ನಿವಾಸಿ ರಮಾನಂದ ಶೆಣೈ ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕನು ಆರೋಪಿಯ ಸೈಕಲ್ ರಿಪೇರಿ ಅಂಗಡಿಗೆ ತೆರಳಿದ ವೇಳೆ, ಬಾಲಕನನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಆತನೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕಳ ನೀಡಿದ್ದು, ಬಾಲಕ ತಪ್ಪಿಸಿಕೊಂಡು ಬಂದವೇಳೆ ವಿಷಯವನ್ನು ಯಾರೀಗೂ ಹೇಳದಂತೆ ಬಾಲಕನಿಗೆ ಬೆದರಿಕೆ ಹಾಕಿದ್ದನು ಎನ್ನಲಾಗಿದೆ.

ಪುಂಜಾಲಕಟ್ಟೆ ಪೊಲೀಸರು ಬಾಲಕನ ದೂರಿನಂತೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ.


Spread the love

Exit mobile version