Home Mangalorean News Kannada News ಅಯೋಧ್ಯೆ ತೀರ್ಪು; ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನ. 9 ರಿಂದ ನ. 10 ಬೆಳಿಗ್ಗಿನ ತನಕ...

ಅಯೋಧ್ಯೆ ತೀರ್ಪು; ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನ. 9 ರಿಂದ ನ. 10 ಬೆಳಿಗ್ಗಿನ ತನಕ ನಿಷೇಧಾಜ್ಞೆ ಜಾರಿ

Spread the love

ಅಯೋಧ್ಯೆ ತೀರ್ಪು; ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನ. 9 ರಿಂದ ನ. 10 ಬೆಳಿಗ್ಗಿನ ತನಕ ನಿಷೇಧಾಜ್ಞೆ ಜಾರಿ

ಮಂಗಳೂರು : ಸರ್ವೋಚ್ಚ ನ್ಯಾಯಾಲಯವು ಅಯೋಧ್ಯೆ ವಿವಾದದ ಬಗ್ಗೆ ಅಂತಿಮ ತೀರ್ಪು ಪ್ರಕಟವಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೆ ಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೇ ತೀರ್ಪಿನ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನವೆಂಬರ್ 9 ರ ಬೆಳಿಗ್ಗೆ 10ರಿಂದ ನವೆಂಬರ್ 10 ಬೆಳಿಗ್ಗೆ 6 ಗಂಟೆಯ ವರೆಗೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ರ ಅನ್ವಯ ನಿರ್ಬಂಧಕ ಆಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ನವೆಂಬರ್ 9ರಿಂದ 11 ಮುಂಜಾನೆ ವರೆಗೆ ಮದ್ಯ ಮಾರಾಟವನ್ನು ಕೂಡ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.


Spread the love

Exit mobile version