ಅಲ್ಪಸಂಖ್ಯಾತರಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ
ಉಡುಪಿ: ರಾಜ್ಯ ಸರಕಾರವು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತರ ಪದವಿ, ಪಿ.ಎಚ್.ಡಿ, ಪೊಷ್ಟ್ ಡಾಕ್ಟರೊಲ್ ಕೋರ್ಸು ಇತ್ಯಾದಿಗಳಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಆಸಕ್ತ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.gokdom.kar.nic.in ದಿಂದ ಪಡೆದು ಜೂನ್ 30 ರೊಳಗಾಗಿ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ