Spread the love
ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಮಂಗಳೂರು: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ(SSP)ದಲ್ಲಿ ಶುಲ್ಕ ಮರುಪಾವತಿ ಯೋಜನೆಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ಆಹ್ವಾನಿಸಲಾಗಿದ್ದ ಆನ್ಲೈನ್ ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆ.15ರವರೆಗೆ ವಿಸ್ತರಿಸಲಾಗಿದೆ.
SSP ಪೋರ್ಟಲ್ ಅಡಿ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ ಅಥವಾ ಸಹಾಯವಾಣಿ ಸಂಖ್ಯೆ� 82777 99990 ಅಥವಾ ತಾಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Spread the love