ಅ. 28-29: ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Spread the love

ಅ. 28-29: ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ಟೋಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ನಗರಸಭೆ, ಹಳೆ ಡಯನ ಬಿಗ್ ಬಜಾರ್ ಮೂಲಕ ಅಜ್ಜರಕಾಡು ಭುಜಂಗ ಪಾರ್ಕ್ ಮಾರ್ಗವಾಗಿ ಅಜ್ಜರಕಾಡು ಮೈದಾನವನ್ನು ಪ್ರವೇಶಿಸಲಿದೆ.

ಈ ಅದ್ದೂರಿ ಮೆರವಣಿಗೆಯಲ್ಲಿ ವಿವಿಧ ಭಾಗಗಳ ಸುಮಾರು 62 ಕ್ಕೂ ಅಧಿಕ ಬಂಟರ ಸಂಘಗಳ 6,000-7,000 ಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ವಿವಿಧ ಕಲಾ ತಂಡಗಳು, ಉಡುಪಿ ಕಡೆಗೋಲು ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ ಹೀಗೆ ವಿವಿಧ ಸ್ತಬ್ಧ ಚಿತ್ರಗಳು, ಕಂಬಳದ ಕೋಣಗಳು, ಕೇರಳದ ತೈಯ್ಯಂ, ಹುಲಿ ವೇಷ, ಕೀಲುಕುದುರೆ ಗೊಂಬೆಗಳು, ಹೊನ್ನಾವರ ಬ್ಯಾಂಡ್ ಸೆಟ್, ಅಗೋಳಿ ಮಂಜಣ್ಣನ ವೇಷಧಾರಿ, ಚೆಂಡೆ, ವಾದ್ಯ, ಡೋಲು, ನಾಗಸ್ವರ, ಬಣ್ಣದ ಕೊಡೆಗಳು ಹಾಗೂ ವಿವಿಧ ವಿನೋದಾವಳಿಗಳು ಮೆರವಣಿಗಯೆ ಮೆರುಗು ಹೆಚ್ಚಿಸಲಿದೆ ಎಂದರು.

ಆ ಬಳಿಕ ಅಜ್ಜರಕಾಡು ಮೈದಾನದಲ್ಲಿ ಎಲ್ಲ ಬಂಟರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಕರ್ನಾಟಕ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ, ಇದೇ ಸಂದರ್ಭ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬ್ಯಾಡ್ಮಿಂಟನ್ ಏಷ್ಯನ್ ಗೇಮ್ಸ್ ವಿಜೇತ ಚಿರಾಗ್ ಶೆಟ್ಟಿ, ಅಂಡರ್ 19 ವರ್ಲ್ಡ್ ಜೂನಿಯರ್ ಚ್ಯಾಂಪಿಯನ್ ಶಿಪ್ ವಿಜೇತ ಅಯುಷ್ ಶೆಟ್ಟಿ ಕಾರ್ಕಳ ಜತೆಗಿರಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಘುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದರು, ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಬಾರ್ಕೂರು ಬಾರ್ಗವ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ಡಾ. ವಿಶ್ವ ಸಂತೋಷ್ ಭಾರತಿ ಶ್ರೀಪಾದರು, ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮಿ ನಾರಾಯಣ ಅಸ್ರಣ್ಣರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ ಮತ್ತು ನೈನಿತಾ ಪ್ರವೀಣ್ ಶೆಟ್ಟಿ, ಹೇರಂಬ ಇಂಡಸ್ಟ್ರೀಸ್ ಇದರ ಸಿಎಂಡಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ, ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಂಬೈ ಇದರ ಸಿಎಂಡಿ ಶ್ರೀ ತೋನ್ಸೆ ಆನಂದ ಎಂ. ಶೆಟ್ಟಿ ಮತ್ತು ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ಡಾ. ಎ.ಜೆ. ಶೆಟ್ಟಿ ಅಧ್ಯಕ್ಷರು, ಎ.ಜೆ. ಸಮೂಹ ಸಂಸ್ಥೆ, ಶ್ರೀ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಅಧ್ಯಕ್ಷರು ಬಂಟರ ಯಾನೆ ನಾಡವರ ಮಾತೃ ಸಂಘ ಜಿಲ್ಲಾಧಿಕಾರಿಗಳಾದ ಡಾ.ಕೆ. ವಿದ್ಯಾಕುಮಾರಿ ಉಪಸ್ಥಿತರಿರುವರು.

ಕ್ರೀಡೋತ್ಸವದಲ್ಲಿ ಜಾಗತಿಕ ಬಂಟರ ಸಂಘಗಗಳ ವಿವಿಧ ತಂಡಗಳು ಭಾಗವಹಿಸಲಿದ್ದು, ಏಕಕಾಲದಲ್ಲ ಪುರುಷರ ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಮಹಿಳೆಯರ ತ್ರೋಬಾಲ್, ಹಗ್ಗಜಗ್ಗಾಟ ನಡೆಯಲಿದೆ, ಹಾಗೂ ಎಲ್ಲಾ ವಯೋಮಾನದವರಿಗೆ ಅಥ್ಲೆಟಿಕ್ ನಡೆಯಲಿದೆ…

ಪ್ರತೀ ವಿಭಾಗದ ವಿಜೇತ ತಂಡಗಳಿಗೆ ನಗದು ಬಹುಮಾನ ಪ್ರಥಮ-1,00,000, ದ್ವಿತೀಯ- 75,000 ತೃತೀಯ ಹಾಗೂ ಚತುರ್ಥ ತಲಾ 50,000 ನಗದು ಹಾಗೂ ಬಂಟರ ಕಪ್ ನೀಡಿ ಗೌರವಿಸಲಾಗುವುದು. ಸಂಜೆ ಎಂಟು ಗಂಟೆಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದರು.

ಅಂದು ಅಪರಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯ ತನಕ ಪ್ರೋ ಕಬಡ್ಡಿ ಮಾದರಿಯಲ್ಲಿ ಎಂಟು ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ.

ಅದೇ ವೇದಿಕೆಯಲ್ಲಿ ಸಮಾಜದ ಪ್ರಮುಖ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಪ್ರಮುಖರಾದ ಬ್ಯಾಡ್ಮಿಂಟನ್ ಏಷ್ಯನ್ ಗೇಮ್ಸ್ ವಿಜೇತ ಚಿರಾಗ್ ಶೆಟ್ಟಿ, ಅಂಡರ್ 19 ವರ್ಲ್ಡ್ ಜೂನಿಯರ್ ಚ್ಯಾಂಪಿಯನ್ ಶಿಪ್ ವಿಜೇತ ಅಯುಷ್ ಶೆಟ್ಟಿ ಕಾರ್ಕಳ, ಡಾ. ಎ. ಸದಾನಂದ ಶೆಟ್ಟಿ ಮಂಗಳೂರು, ಡಾ. ಎಮ್. ಎನ್. ರಾಜೇಂದ್ರ ಕುಮಾರ್, ಶ್ರೀ ಕೆ. ಪ್ರಕಾಶ್ ಶೆಟ್ಟಿ, ಶ್ರೀ ಚಂದ್ರಹಾಸ ಕೆ.ಶೆಟ್ಟಿ, ಶ್ರೀ ಪ್ರವೀಣ್ ಶೆಟ್ಟಿ ವಕ್ವಾಡಿ, ಶ್ರೀ ಸತೀಶ್ ಶೆಟ್ಟಿ ಪಟ್ಲ, ಶ್ರೀ ಸಂತೋಷ್ ಶೆಟ್ಟಿ ಪುಣೆ, ವಿಶು ಶೆಟ್ಟಿ ಅಂಬಲಪಾಡಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಸಮ್ಮೇಳನದಲ್ಲಿ ದೇಶದ ಪ್ರಮುಖ ಸಿನಿತಾರೆಯರಾದ ಸುನಿಲ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಐಶ್ವರ್ಯ ರೈ ಬಚ್ಚನ್, ಶಿಲ್ಪಾ ಶೆಟ್ಟಿ ಕುಂದ್ರಾ, ರಿಷಬ್ ಶೆಟ್ಟಿ, ಗುರುಕಿರಣ್ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಶಿವಧ್ವಜ್ ಶೆಟ್ಟಿ, ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ರೂಪೇಶ್ ಶೆಟ್ಟಿ, ಯಶ್ ಹಾಗೂ ಭಾರತದ ಹೆಸರಾಂತ ಚಿತ್ರತಾರೆಯರು, ನಿರ್ಮಾಪಕರು, ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದರು.

ಅಕ್ಟೋಬರ್ 29ರಂದು ಸಾಂಸ್ಕೃತಿಕ ವೈಭವದ ಉದ್ಘಾಟನಾ ಸಮಾರಂಭ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಶ್ರೀ ಮೋಹನ್ ಆಳ್ವಾ ನೆರವೇರಿಸಲಿದ್ದಾರೆ. ಮುಂಬೈ ಉತ್ತರ ಸಂಸದ ಶ್ರೀ ಗೋಪಾಲ ಶೆಟ್ಟಿ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಚಿವೆ ಶೋಭಾ ಕರಂದ್ಲಾಜೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕರ್ನಾಟಕ ಸರಕಾರ ಇದರ ಅಧ್ಯಕ್ಷರು ಕೆ. ಜಯಪ್ರಕಾಶ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿರುವರು.
ಸಾಂಸ್ಕೃತಿಕ ಬೈಭವದಲ್ಲಿ ಸುಮಾರು 30 ತಂಡಗಳು ಸ್ಪರ್ಧಿಸಲಿವೆ.. ಪ್ರತೀ ತಂಡಗಳಿಗೆ 2 +6 ನಿಮಿಷ ಸಮಯ ನೀಡಲಾಗುತ್ತಿದೆ. ಗುತ್ತಿನ ಅರಮನೆಯ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಮೂರು ಜನ ಸೆಲೆಬ್ರಿಟಿಗಳು ತೀರ್ಪುಗಾರರಾಗಿರಲಿದ್ದಾರೆ.

11 ಗಂಟೆಗೆ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ವಿಚಾರಗೋಷ್ಠಿ ನಡೆಯಲಿದ್ದು, ಮೊದಲ ಗೋಷ್ಠಿ ಸ್ಥಿತ್ಯಂತರದಲ್ಲಿ ಬಂಟರು: ಶಿಕ್ಷಣ ಮತ್ತು ನಿರುದ್ಯೋಗ.ಎರಡನೇ ಗೋಷ್ಠಿ ಕವಿ ಸಮಯ- ಕಾವ್ಯನಮನ – ಚಿತ್ತ ಚಿತ್ತಾರ ಕಾರ್ಯಕ್ರಮ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಹಾಗೂ ಸಂಚಾಲಕರು ವಿಶ್ವಬಂಟರ ಸಾಂಸ್ಕೃತಿಕ ವೈಭವ ಚಂದ್ರಹಾಸ ಡಿ. ಶೆಟ್ಟಿ, ವಿಶ್ವ ಬಂಟರ ಕ್ರೀಡಾಕೂಟ, ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳಾರು ಹಾಗೂ , ಸಹಸಂಚಾಲಕರು ಡಾ. ರೋಶನ್ ಕುಮಾರ್ ಶೆಟ್ಟಿ ಇತರರು ಉಪಸ್ಥಿತರಿದ್ದರು.


Spread the love