ಆರ್ಥಿಕ ಗಣತಿಗೆ ಸಹಕರಿಸಲು ಮನವಿ
ಮಂಗಳೂರು : ಆರ್ಥಿಕ ಗಣತಿಯ ಸಂದರ್ಭದಲ್ಲಿ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಬೇಕು ಎಂದು ಮಂಗಳೂರು ಮಹಾನಗರಪಾಲಿಕೆಯ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಹೇಳಿದರು.
ಗುರುವಾರ ಮಂಗಳೂರು ಮಹಾನಗರಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2019ನೇ ಸಾಲಿನ 7ನೇ ಆರ್ಥಿಕ ಗಣತಿಯ ಪ್ರಗತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಆರ್ಥಿಕ ಗಣತಿಯ ಸಂದರ್ಭದಲ್ಲಿ ನಗರ ವ್ಯಾಪ್ತಿಯಲ್ಲಿ ಏನಾದರೂ ತೊಂದರೆಯಾದರೆ ತಕ್ಷಣ ಹತ್ತಿರದ ಹೆಲ್ತ್ ಇನ್ಸ್‍ಪೆಕ್ಟರ್, ಅಲ್ಲಿನ ಕಾರ್ಪೋರೇಟರ್‍ಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಜೊತೆಗೆ ಇದಕ್ಕೆ ಎಲ್ಲಾ ಇಲಾಖೆಗಳು ಸಹಕಾರ ನೀಡುತ್ತದೆ ಎಂದು ಹೇಳಿದರು.
ಆರ್ಥಿಕ ಗಣತಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು, ಮಾರ್ಚ್ 23 ರ ಒಳಗಾಗಿ ಪೂರ್ಣಗೊಳಿಸಬೇಕೆಂದು ಅವರು ಸೂಚಿಸಿದರು.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಥಿಕ ಗಣತಿ ಉಸ್ತುವಾರಿ ಸಮಿತಿಯ ಸಹಾಯಕ ನಿರ್ದೇಶಕ(ಸಾಂಖ್ಯಿಕ), ಸದಸ್ಯ ಕಾರ್ಯದರ್ಶಿ ಸುಷ್ಮಾ ಕೆ.ಎಸ್. ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.