ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟಕ್ಕೆ ಮೇಯರ್ ಕವಿತಾ ಸನೀಲ್ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಆಶ್ರಯದಲ್ಲಿ ಜರುಗುತ್ತಿರುವ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನೀಲ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಯಾವುದೇ ಕ್ರೀಡೆಯಲ್ಲಿ ಭಾಗವಹಿಸುವುದು ಅತೀ ಮುಖ್ಯ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸೋಲು ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುವ ಪ್ರವೃತ್ತಿಯನ್ನು ಬೆಳೆಸುತ್ತದೆ ಎಂದರು.
ಸುಮಾರು 7 ವಿಭಾಗಗಳಲ್ಲಿ ನಡೆಯುವ ಬಾಲಕರ ಮತ್ತು ಬಾಲಕಿಯರ ವಿಭಾಗಗಳಲ್ಲಿ ಪ್ರಾಥಮಿಕ, ಹೈಸ್ಕೂಲು, ಪಿಯು ವಿಭಾಗ ಮತ್ತು ಕಾಲೇಜು ವಿಭಾಗಗಳಲ್ಲಿ 200 ಕ್ಕೂ ಮಿಕ್ಕಿ ತಂಡಗಳು ಭಾಗವಹಿಸುತ್ತಿವೆ.
ಸಮಾರಂಭದಲ್ಲಿ ಕ್ರಿಕೆಟ್ ಆಡಳಿತಗಾರ ಬಾಲಕೃಷ್ಣ ಪೈ, ಯುವಜನ ಇಲಾಖಾಧಿಕಾರಿ ಪ್ರದೀಪ್ ಡಿ’ಸೋಜಾ, ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷರಾದ ಡಿ ಎಮ್ ಅಸ್ಲಂ, ಪದಾಧಿಕಾರಿಗಳಾದ ಪಿವಿ ಅನಿಲ್ ಕುಮಾರ್, ಯುವರಾಜ್, ಲತೀಫ್, ಉಮೇಶ್ ಉಚ್ಚಿಲ್ ಉಪಸ್ಥಿತರಿದ್ದರು.