ಇಂದಿನಿಂದ ಜಿಲ್ಲೆಯಾದ್ಯಂತ ನಿಷೇಧಾಜ್ಞೆ
ಮಂಗಳೂರು: ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ.
ನಗರದ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಇದೇ 23 ರ ಮಧ್ಯಾಹ್ನ 2 ಗಂಟೆಯಿಂದ 24 ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ವಿಪುಲ್‌ಕುಮಾರ್ ಆದೇಶಿಸಿದ್ದಾರೆ.
ನಗರ ಪೊಲೀಸ್ ಆಯುಕ್ತಾಲಯ ಹೊರತುಪಡಿಸಿ, ಜಿಲ್ಲೆಯ ಉಳಿದ ಭಾಗಗಳಲ್ಲಿ ಇದೇ 23 ರ ಬೆಳಿಗ್ಗೆ 6 ಗಂಟೆಯಿಂದ ಇದೇ 25 ರಂದು ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.