ಈಜಿನಲ್ಲಿ ಶಿಕ್ಷಕ ದಂಪತಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Spread the love

ಈಜಿನಲ್ಲಿ ಶಿಕ್ಷಕ ದಂಪತಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ಮುಲ್ಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕರ ನಾಗರಾಜ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್, 100 ಮೀ. ಬ್ರೆಸ್ಟ್ ಸ್ಟ್ರೋಕ್, 200 ಮೀ. ಬ್ರೆಸ್ಟ್ ಸ್ಟ್ರೋಕ್, 4×100 ಮೆಡ್ಲೆ ರಿಲೇ, 4×100 ಫ್ರೀ ಸ್ಟೈಲ್ ರಿಲೇ ಸೇರಿದಂತೆ ಒಟ್ಟು ಐದು ಸ್ಪರ್ಧೆಗಳಲ್ಲಿ ಐದು ಚಿನ್ನದ ಪದಕ ಪಡೆದು ವಿಶಿಷ್ಟ ಸಾಧನೆ ಮಾಡಿ ಸತತ ಎಂಟನೆಯ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಮಂಗಳೂರು ತಣ್ಣೀರುಬಾವಿಯ ಸಮುದ್ರದಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ ಹಾಕಿ ಪದ್ಮಾಸನ ಭಂಗಿಯಲ್ಲಿ ಒಂದು ಕಿ.ಮೀ. ಈಜಿ ಜಾಗತಿಕಮಟ್ಟದಲ್ಲಿ ವಿಭಿನ್ನ ಸಾಧನೆ ಮಾಡಿದ್ದರು.

ಇವರ ಪತ್ನಿ ಮುಲ್ಲಕಾಡು ಸರಕಾರಿ ಪ್ರೌಢಶಾಲೆಯ‌ ಹಿಂದಿ ಶಿಕ್ಷಕಿ ಕೃಪಾ, 100 ಮೀ. ಬಟರ್ ಫ್ಲೈ ಚಿನ್ನದ ಪದಕ, 100ಮೀ. ಬ್ರೆಸ್ಟ್ ಸ್ಟ್ರೋಕ್ ಬೆಳ್ಳಿ ಪದಕ

200 ಮೀ. ಫ್ರೀ ಸ್ಟೈಲ್ ಬೆಳ್ಳಿ ಪದಕ, ಪಡೆದು ಸತತ ನಾಲ್ಕನೆಯ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್, ಬಿ.ಕೆ.ನಾಯ್ಕ್ ಅವರು ತರಬೇತಿ ನೀಡಿರುತ್ತಾರೆ. ಇವರಿಬ್ಬರು ಮಂಗಳೂರು ಸೀ ಸ್ವಿಮ್ಮರ್ಸ್ ತಂಡದ ಸಕ್ರಿಯ ಸದಸ್ಯರಾಗಿದ್ದಾರೆ. ಇವರ ಈ ಸಾಧನೆಗಾಗಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರದೀಪ್ ದಿಸೋಜಾ, ಮುಲ್ಲಕಾಡು ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಅಭಿನಂದಿಸಿದರು.


Spread the love
Subscribe
Notify of

0 Comments
Inline Feedbacks
View all comments