ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ – ಡಿಸಿ ಡಾ. ವಿದ್ಯಾಕುಮಾರಿ
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿಯವರಿಂದ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭ ಮಾತನಾಡಿದ ಅವರು ಮಾತನಾಡಿ, ಭಕ್ತಿಭಾವದ ಸಂಭ್ರಮವನ್ನು ನವರಾತ್ರಿಯ ಸಂದರ್ಭ ಕಾಣಬಹುದಾಗಿದೆ. ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ. ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. ನಾಡಿಗೆ ಸುಖ ಸಮದ್ಧಿ ಜನರು ಸುಖ ಸಂತೋಷದಿಂದ ಇರಲಿ ಎಂದು ಶುಭಹಾರೈಸಿದರು.
ಇದೇ ಸಂದರ್ಭ ಅತಿಥಿಗೃಹ, ಅನ್ನ ಛತ್ರ, ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಮೀನುಗಾರಿಕಾ ಪರಿಕರಗಳು ಮತ್ತು ಮನೋಹರ್ ಎರ್ಮಾಳುರವರ ಛಾಯಾಚಿತ್ರ ಪ್ರದರ್ಶನವನ್ನು ಕ್ಷೇತ್ರದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ ಉದ್ಘಾಟಿಸಿದರು.
ನವದುರ್ಗೆಯರು ಮತ್ತು ಶ್ರೀ ಶಾರದಾ ಪ್ರತಿಷ್ಠಾಪನೆ ಯೊಂದಿಗೆ ಶಾರದೆಗೆ ಬೆಳ್ಳಿ ವೀಣೆ, ಬೆಳ್ಳಿ ಕಿರೀಟಧಾರಣೆಯು ಈ ಸಂದರ್ಭದಲ್ಲಿ ನಡೆಯಿತು.
ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ನವದುರ್ಗೆಯರಿಗೆ ಮಹಾಮಂಗಳಾರತಿ ನಡೆಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಹಾಯಕ ಕಮೀಷನರ್ ರಶ್ಮಿ ಎಸ್. ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಾಪು ತಹಶೀಲ್ದಾರ್ ನಾಗರಾಜ ನಾಯ್ಕಡ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಕಿದಿಯೂರು ಹೋಟೆಲ್ ಪ್ರೈ.ಲಿ. ನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಮೊಗವೀರ ಮಹಾಜನ ಸಂಘದ ಮಹಿಳಾ ಘಟಕಾಧ್ಯಕ್ಷೆ ಅಧ್ಯಕ್ಷೆ ಉಷಾರಾಣಿ, ನಾಲ್ಕು ಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಉಪಸ್ಥಿತರಿದ್ದರು. ̈
ಡಾ. ಜಿ. ಶಂಕರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.