ಉಚ್ಚಿಲ ದಸರಾ 2024 – ವಿಜೃಂಭಿಸಿದ ಸಾಮೂಹಿಕ ಕುಣಿತ ಭಜನೆ
ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 3 ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024ರ ಅಂಗವಾಗಿ ಕ್ಷೇತ್ರದ ಪ್ರಾಂಗಣದ ಸುತ್ತ ನಡೆದ ಸಾಮೂಹಿಕ ಕುಣಿತ ಭಜನೆ ಭಕ್ತಿ ಭಾವದ ಪರಾಕಾಷ್ಠೆಗೆ ಸಾಕ್ಷಿಯಾಯಿತು.
ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50ಕ್ಕೂ ಅಧಿಕ ಭಜನಾ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು.
ದಸರಾ ರೂವಾರಿ ದಕ್ಷಿಣ ಕನ್ನಡ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ ಶಂಕರ್ ಭಜನಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕ್ಷೇತ್ರದ ಪ್ರಧಾನ ಅರ್ಚಕ ವೆ.ಮೂ. ಕೆ.ವಿ ರಾಘವೇಂದ್ರ ಉಪಾಧ್ಯಾಯ, ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರಾ ಮಲ್ಪೆ, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಅಮೀನ್ ಉಪಸ್ಥಿತರಿದ್ದರು.