Home Mangalorean News Kannada News ಉಜಿರೆ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ: ರಾಜ್ಯದ ಸಾಂಸ್ಕøತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಯಬೇಕು : ಡಿ....

ಉಜಿರೆ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ: ರಾಜ್ಯದ ಸಾಂಸ್ಕøತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಯಬೇಕು : ಡಿ. ವೀರೇಂದ್ರ ಹೆಗ್ಗಡೆ

Spread the love

ಉಜಿರೆ: ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರ ಹಾಗೂ ದಾನಿಗಳ ಸಹಕಾರದೊಂದಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವನ್ನು ರಾಜ್ಯದ ಸಾಂಸ್ಕøತಿಕ ಪರಂಪರೆಗಳ ಪ್ರಾತಿನಿಧಿಕ ಕೇಂದ್ರವಾಗಿ ಬೆಳೆಸಬೇಕು. ಜನರ ವಿಶ್ವವಿದ್ಯಾಲಯವಾಗಿ ಬೆಳೆಯಬೇಕು, ಬೆಳಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.

IMG-20151115-WA0000

ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಯಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಡಾ. ಕೆ. ಚಿನ್ನಪ್ಪಗೌಡ ಭಾನುವಾರ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

ದೇಶ-ವಿದೇಶಗಳ ವಿಶ್ವವಿದ್ಯಾಲಯಗಳನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ಅವರ ಸಲಹೆ, ಸೂಚನೆ ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶ್ವವಿದ್ಯಾಲಯವನ್ನು ಬೆಳೆಸಬೇಕು. ಮೂಲಭೂತ ಸೌಕರ್ಯಗಳೊಂದಿಗೆ ಶೈಕ್ಷಣಿಕವಾಗಿಯೂ ವಿಶ್ವವಿದ್ಯಾಲಯವನ್ನು ಬೆಳೆಸಬೇಕು ಎಂದು ಹೇಳಿದ ಹೆಗ್ಗಡೆಯವರು ಈ ಬಗ್ಯೆ ತಮ್ಮ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ದೇವರ ದರ್ಶನದ ಬಳಿಕ ಹಾವೇರಿಗೆ ಅವರು ಪ್ರಯಾಣ ಬೆಳೆಸಿದರು. ಪತ್ನಿ ಡಾ. ಶಾಂತಿ ಇದ್ದರು.


Spread the love

Exit mobile version