ಉಡುಪಿಯಲ್ಲಿ ಧಾರಾಕಾರ ಮಳೆ; ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.