Home Mangalorean News Kannada News ಉಡುಪಿ: ಅರಿವು ಸಾಲ ಯೋಜನೆ – ಅರ್ಜಿ ಆಹ್ವಾನ

ಉಡುಪಿ: ಅರಿವು ಸಾಲ ಯೋಜನೆ – ಅರ್ಜಿ ಆಹ್ವಾನ

Spread the love

ಉಡುಪಿ: ಅರಿವು ಸಾಲ ಯೋಜನೆ – ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‍ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯದಂತಹ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‍ಸೈಟ್ kmdconline.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ನಿಗಮದ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಜುಲೈ 8 ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂ: 0820-2574596, ಕಾರ್ಕಳ ದೂ.ಸಂ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

Exit mobile version