ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಹಲವಾರು ವಿಷಯಗಳಲ್ಲಿ ಸಂಬಂಧ ಪಟ್ಟವರಿಗೆ ಮನವಿಸಲ್ಲಿಸುತ್ತಿದ್ದು, ಸಾಮಾನ್ಯ ಜನರಿಗೆ ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ, ಬಡ ಜನರಿಗೆ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಿಗದೆ ಒದ್ದಾಡುತ್ತಿದ್ದರಿಂದ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ 29-01-2016ರ ಶುಕ್ರವಾರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ
ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಬೇಡಿಕೆಗಳು:-
1. ಸಿ.ಸಿ ಕ್ಯಾಮರಾ ಅಳವಡಿಸಬೇಕು
2. ಹಗಲು ಇರುಳು ಕಾವಲುಗಾರರನ್ನು ನೇಮಿಸಬೇಕು
3. ಅಯಾಯ ಕಾಯಿಲೆಗಳಿಗೆ ಸಂಬಂಧಪಟ್ಟ ವೈದ್ಯರನ್ನು ನೇಮಿಸುವುದು.
4. ಶೂಶ್ರೂಷಿಯರ ಸೇವೆ.
5. ರಕ್ತನಿಧಿ ಘಟಕವು ಹಗಲುರಾತ್ರಿ ಕಾರ್ಯನಿರ್ವಹಿಸುವಂತೆ ಮಾಡುವುದು.
6. ತುರ್ತು ಚಿಕಿತ್ಸೆ ವಿಭಾಗದ ಮುಖ್ಯದ್ವಾರದ ರಸ್ತೆಯನ್ನು ಸರಿಪಡಿಸುವುದು ಮತ್ತು ಈ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ನೀಡದವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಈ ಎಲ್ಲಾ ಜನಪಯೋಗಿ ಕಾರ್ಯಕ್ಕೆ ಸಂಬಂಧಪಟ್ಟವರು ಸ್ಪಂದಿಸದಿದ್ದಲ್ಲಿ ವೇದಿಕೆಯು ಪ್ರತಿಭಟನೆಯೊಂದಿಗೆ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ವೇದಿಕೆಯ ಜಿಲ್ಲಾಧ್ಯಕ್ಷರಾದ ರವಿಶೆಟ್ಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.