ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ವಿ ಅಮೀನ್ ಆಯ್ಕೆ

Spread the love

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ವಿ ಅಮೀನ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂಜಿನಿಯರಿಂಗ್ ಪದವೀಧರ ಕಾಪು ಕ್ಷೇತ್ರ ಯುವ ಕಾರ್ಯಕರ್ತ ವಿಶ್ವಾಸ್ ವಿ ಅಮೀನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಶ್ವಾಸ್ ವಿ ಅಮೀನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನೀಕೇಶನ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಪಡುಬಿದ್ರೆ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ವಿಜಯ ಎ ಅಮೀನ್ ಹಾಗೂ ಪ್ರಸ್ತುತ ಪಂಚಾಯತ್ ಅಧ್ಯಕ್ಷೆ ದಮಯಂತಿ ಅಮೀನ್ ಅವರ ಮಗನಾಗಿದ್ದಾರೆ.

ಅವಿರೋಧ ಆಯ್ಕೆಯ ಬಳಿಕ ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ವಿಶ್ವಾಸ್ ಅಮೀನ್ ಅವರು ಯೂತ್ ಕಾಂಗ್ರೆಸ್ ವಿಧಾನಸಭಾ ಘಟಕಗಳನ್ನು ಬಲಪಡಿಸುವುದರೊಂದಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ಸಜ್ಜುಗೊಳಿಸುವತ್ತ ಪ್ರಯತ್ನಿಸಿಲಾಗುವುದು ಎಂದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ನಾಯಕ ವಿಘ್ನೇಶ್ ಕಿಣಿ ಅವರು ಜಿಲ್ಲಾ ಯುವ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಬ್ಲಾಕ್ ಯೂತ್ ಕಾಂಗ್ರೆಸಿನ ಹಿಂದಿನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ, ಯುವ ನ್ಯಾಯವಾದಿ, ಶಿರ್ವ ಗ್ರಾಮಪಂಚಾಯತ್ ಸದಸ್ಯ ಮೆಲ್ವಿನ್ ಡಿಸೋಜ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸಂತೋಷ್ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ನಿಯಾಝ್ ಪಡುಬಿದ್ರೆ ಆಯ್ಕೆಯಾಗಿದ್ದಾರೆ.

ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಕೋಟ್ಯಾನ್ ಆಯ್ಕೆಯಾದರೆ, ರವಿಚಂದ್ರ ಕುಲಾಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


Spread the love