ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ
ಉಡುಪಿ: ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೇಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಆಗಿರುವ ಇವರು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದವರಾಗಿದ್ದು, ಕಾರ್ಕಳ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಆಗಿ, ಕಾರ್ಕಳ ಯುವ ಕಾಂಗ್ರೇಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ, ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ಹಾಗೂ ಹಲವು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದು ಇತ್ತೀಚೆಗೆ ನಡೆದ ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸ್ಥಾನದ ಪೈಪೊಟಿಯಲ್ಲಿ ಅತ್ಯಧಿಕ ಮತ ಪಡೆದು ಜಿಲ್ಲಾಧ್ಯಕ್ಷರಾಗಿ ಅಯ್ಕೆಯಾಗಿದ್ದಾರೆ.