ಉಡುಪಿ ಜಿಲ್ಲೆಯಲ್ಲಿ ಕೊರೋನಾ ಗೆ 9ನೇ ಬಲಿ- ಕುಂದಾಪುರ- ಕಿರಿಮಂಜೇಶ್ವರದ 80 ವರ್ಷದ ವ್ಯಕ್ತಿ ಸಾವು
ಉಡುಪಿ: ಕೊರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಬಲಿಯಾದ ವ್ಯಕ್ತಿ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರದ 80 ವರ್ಷ ಪ್ರಾಯದ ವ್ಯಕ್ತಿಯಾಗಿದ್ದು, ಎರಡು ದಿನಗಳಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಶ್ವಾಸಕೋಶದ ತೊಂದರೆಗೆ ಐಸಿಯು ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಈ ನಡುವೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.