ಉಡುಪಿ ಡಿಸಿಐಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Spread the love

ಉಡುಪಿ ಡಿಸಿಐಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರುನ್ನು ಡಿಸಿಐಬಿ ಪೊಲೀಸರು ಜುಲೈ 15 ರಂದು ಬಂಧಿಸಿದ್ದಾರೆ.

ಬಂಧಿತರನ್ನು ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್ (20) ಮತ್ತು ಅಫ್ತಾಬ್ ಆಲಿ (21) ಎಂದು ಗುರುತಿಸಲಾಗಿದೆ.

ಜುಲೈ 15 ರಂದು  ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ   ವಿಷ್ಣುವರ್ಧನ್ ಎನ್, ಐ.ಪಿ.ಎಸ್ ರವರ ನಿರ್ದೇಶನದಲ್ಲಿ  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ   ಕುಮಾರ್ ಚಂದ್ರ ಕೆ.ಎಸ್.ಪಿ.ಎಸ್ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ   ಟಿ.ಆರ್.ಜೈಶಂಕರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ಅವರು ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಶೀಂದ್ರಾ ಎಂಬಲ್ಲಿ ರುವ ವ್ಯಾಲ್ಯೂ  ವೀವ್ ಕೌಂಟಿ ಕ್ಲಬ್ ಬಳಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ  1 ಕೆ.ಜಿ. 140 ಗ್ರಾಂ ಗಾಂಜಾ, 2 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಯಮಹಾ ಫೇಸಿನೋ ಸ್ಕೂಟರ್ ನಂಬರ್ ಕೆಎ 20 ಇಟಿ 8293 ದನ್ನು ಸ್ವಾಧೀನಪಡಿಸಿಕೊಂಡು ಮಣಿಪಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು , ಮೌಲ್ಯ ಸುಮಾರು 1,45,000/- ರೂಪಾಯಿ ಆಗಬಹುದು.

ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್‌ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಮು ಹೆಗೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್‌ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಅವರು ಸಹಕರಿಸುತ್ತಾರೆ.


Spread the love