ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಸನ್ಮಾನ

Spread the love

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಸನ್ಮಾನ

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಕಾಂಚನ್ ಅವರನ್ನು ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ನೇತೃತ್ವದಲ್ಲಿ ಮಂಗಳವಾರ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಸದಸ್ಯರು ಹೋಟೆಲ್ ನಡೆಸುವ ಬಗ್ಗೆ ತಾವು ಅನುಭವಿ ಸುತ್ತಿರುವ ಸಮಸ್ಯೆಗಳನ್ನು ರಮೇಶ್ ಕಾಂಚನ್ ಅವರಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಲಕ್ಷ್ಮಣ್ ಜಿ ನಾಯಕ್, ಎಂ.ವಿಠ್ಠಲ್ ಪೈ, ಹರೀಶ್ ಹೆಗ್ಡೆ, ಕಾರ್ಯದರ್ಶಿ ಕೆ.ನಾಗೇಶ್ ಭಟ್ ಹಾಗೂ ಸದಸ್ಯರಾದ ರವಿ ಕುಮಾರ್, ಶಿವಪ್ರಸಾದ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಗೋಪಾಲ್ ಬಂಗೇರ, ಗಿರೀಶ್ ಶೇರಿಗಾರ್, ಸುದರ್ಶನ್ ತಂತ್ರಿ, ಸಂಘದ ವ್ಯವಸ್ಥಾಪಕರಾದ ಬಿ.ಅಶೋಕ್ ಪೈ ಹಾಗೂ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments