ಉಡುಪಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – ನಿಷೇಧಾಜ್ಞೆ ಜಾರಿ

Spread the love

ಉಡುಪಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ – ನಿಷೇಧಾಜ್ಞೆ ಜಾರಿ

ಉಡುಪಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 18 ರ ವರೆಗೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಾದ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಬಾಲಕಿಯರು, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರು, ಸಂತ ಮೇರಿ ಪದವಿ ಪೂರ್ವ ಕಾಲೇಜು ಶಿರ್ವ, ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ, ಮಿಲಾಗ್ರೀಸ್ ಪದವಿ ಪೂರ್ವ ಕಾಲೇಜು ಕಲ್ಯಾಣ ಪುರ, ನೇಶನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು, ವಿವೇಕಾ ಪದವಿ ಪೂರ್ವ ಕಾಲೇಜು ಕೋಟ, ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ, ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯಡಕ, ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ, ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ, ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ ಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ, ಭಂಡರಕರ್ಸ ಪದವಿ ಪೂರ್ವ ಕಾಲೇಜು ಕುಂದಾಪುರ, ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ, ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು, ಸರಕಾರಿ ಪದವಿ ಪೂರ್ವ ಕಾಲೇಜು ಶೀರೂರು, ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ, ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ, ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳ, ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ, ಆರ್.ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ, ಸರಕಾರಿ ಪದವಿ ಪೂರ್ವ ಕಾಲೇಜು ವಂಡ್ಸೆ, ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು , ಇಲ್ಲಿ ವಾರ್ಷಿಕ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ಪರೀಕ್ಷಾ ಕೇಂದ್ರ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿ ಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.


Spread the love