ಉಡುಪಿ: ಜಿಲ್ಲೆಯಲ್ಲಿ 2015 ನೇ ಸಾಲಿನ ಮಳೆಗಾಲದ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ಸಂಬಂದಪಟ್ಟ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾದಿಕಾರಿಗಳ ಕಚೇರಿ ಮತ್ತು ಎಲ್ಲಾ ತಹಸೀಲ್ದಾರ್ ಗಳ ಕಚೇರಿಯಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7 ನಿಯಂತ್ರಣಾ ಕೊಠಡಿಯನ್ನು 24 ಗಂಟೆಗಳ ಕಾಲ ತೆರೆಯಲಾಗಿದೆ. ಹಾಗೂ ಮುಂಗಾರಿನ ಮಳೆಗಾಲದಲ್ಲಿ ಸಮುದ್ರ ಕೊರೆತ ಹಾನಿಯನ್ನು ತಡೆಗಟ್ಟುವಲ್ಲಿ ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲು ಕಾರ್ಯ ನಿರ್ವಾಹಕ ಇಂಜಿನಿಯರ್ ಬಂದರು ಮತ್ತು ಮೀನುಗಾರಿಕಾ ವಿಭಾಗ ಉಡುಪಿ ಇವರಿಗೆ ಸೂಚನೆ ನೀಡಲಾಗಿದೆ.
ಒಟ್ಟಾರೆಯಾಗಿ 2015 ನೇ ಸಾಲಿನ ಮಳೆಗಾಲವನ್ನು ಸಮರ್ಥವಾಗಿ ನಿರ್ವಹಿಸಲು ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ತಿಳಿಸಿದ್ದಾರೆ.