ಉಡುಪಿ:– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಉಡುಪಿ ಜಿಲ್ಲೆರವರ ಸಂಯುಕ್ತ ಆಶ್ರಯದಲ್ಲಿ ಪ್ರತಿ ಕುಟುಂಬಕ್ಕೂ ಆಹಾರ ಭದ್ರತೆ ನೀಡುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ವಿತರಿಸುವ ಹಾಗೂ ರಿಯಾಯಿತಿ ದರದಲ್ಲಿ ತಾಳೆಎಣ್ಣೆ ಮತ್ತು ಉಪ್ಪು ವಿತರಿಸುವ ಕಾರ್ಯಕ್ರಮವನ್ನು ಮೇ 1 ರಂದು ಬೆಳಗ್ಗೆ 10.30 ಗಂಟೆಗೆ ಜೆ.ಸಿ. ಸಭಾಭವನ ಕಾಪು, ಉಡುಪಿ ಜಿಲ್ಲೆ ಇಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಗರಾಭಿವೃದ್ಧಿ ಹಾಗೂ ಉಸ್ತುವಾರಿ ಸಚಿವರಾದ ವಿನಯಕುಮಾರ್ ಸೊರಕೆ ಇವರು ನೆರವೇರಿಸುವರು. ಅಧ್ಯಕ್ಷತೆಯನ್ನು ಉಳಿಯಾರಗೋಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ಯು ವಹಿಸುವರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್ನ ಅಧ್ಯಕ್ಷರಾದ ಸವಿತಾ ಶಿವಾನಂದ ಕೋಟ್ಯಾನ್, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ನ ಶಾಸಕರು ಹಾಗೂ ವಿಧಾನಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಮೋದ್ ಮಧ್ವರಾಜ್, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಗೋಪಾಲ ಪೂಜಾರಿ, ವಿಧಾನಪರಿಷತ್ನ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಕೆ.ಪ್ರತಾಪ್ಚಂದ್ರ ಶೆಟ್ಟಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಪಿ. ಯುವರಾಜ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಸುನೀತಾ ನಾಯ್ಕ್ , ಕಾಪು ಗ್ರಾ.ಪಂ. ಅಧ್ಯಕ್ಷೆ ಉಷಾ ಶೆಣ್ಯೆ ಹಾಗೂ ಮತ್ತಿತರು ಗಣ್ಯರು ಭಾಗವಹಿಸುವರು.