ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ: ಚೀನಾ-ಭಾರತ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಉಡುಪಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಉಡುಪಿ ಅಜ್ಜರಕಾಡಿನ ಯುದ್ಧ ಸ್ಮಾರಕಕ್ಕೆ ಪುಷ್ಪಾ ನಮನವನ್ನು ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಿ ಯೋಧರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು.
ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಕೆಂಪರಾಜ್ ಮಾತನಾಡಿ ನಮ್ಮ 20 ಯೋಧರ ಸಾವಿಗೆ ಬದಲಾಗಿ ಸೈನದ 2000 ಯೋಧರ ಬಲಿ ಪಡೆಯಬೇಕು ಭಾರತ ಈಗ ಸರ್ವಶಕ್ತ ವಾಗಿದ್ದು ಗಜಗಾಂಭೀರ್ಯ ರೀತಿಯಲ್ಲಿ ನಡೆಯುತ್ತಿದೆ. ಕೆಲವೊಂದು ನಾಯಿ-ನರಿಗಳು ಬೊಬ್ಬೆ ಹಾಕಲು ಪ್ರಾರಂಭಿಸಿದೆ. ಪಾಕಿಸ್ತಾನ ಮತ್ತು ಚೀನಾ ಸದಾ ಕಾಲು ಕೆರೆದು ಜಗಳಕ್ಕೆ ನಿಲ್ಲುತ್ತದೆ. ಇವರಿಗೆ ತಕ್ಕ ಉತ್ತರವನ್ನು ನೀಡಲು ಭಾರತ ಸರ್ವಸನ್ನದ್ಧವಾಗಿದೆ. 20 ಯೋಧರ ಕುಟುಂಬಗಳಿಗೆ ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ನಗರಸಭಾಸದಸ್ಯರಾದ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳಕೆಬೈಲು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ನಾಯಕರಾದ ನರಸಿಂಹ ಮೂರ್ತಿ, ಹರೀಶ್ ಕಿಣಿ, ಸತೀಶ್ ಅಮೀನ್, ಜನಾರ್ಧನ್ ಭಂಡಾರ್ ಕರ್, ಪ್ರಶಾಂತ್ ಪೂಜಾರಿ, ಗೀತಾ ವಾಗ್ಳೆ, ಡಾ ಸುನೀತಾ ಶೆಟ್ಟಿ, ರೋಶನಿ ಒಲಿವೇರ್, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.