ಉಡುಪಿ:- ಸರಕಾರದ ವಿವಿಧ ಭಾಗ್ಯ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯದ ಮುಖ್ಯಮಂತ್ರಿಗಳು ಜೂನ್ 27 ರಂದು ಮೈಸೂರಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 6 ಮಂದಿ ಫಲಾನುಭವಿಗಳು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ಷೀರಭಾಗ್ಯ ಯೋಜನೆಯ ಫಲಾನುಭವಿ ಸರಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಆದಿತಿ ಮುಖ್ಯಮಂತ್ರಿಗಳೊಂದಿಗೆ ನೇರ ಸಂವಾದದಲ್ಲಿ ಮಾತನಾಡಿ, ಕ್ಷೀರಭಾಗ್ಯದ ಅನುಕೂಲದ ಬಗ್ಗೆ ಮುಖ್ಯಮಂತ್ರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಶಾಲಾ ಮಕ್ಕಳಿಗೆ ವಾರದ 6 ದಿನ ಹಾಲು ನೀಡಬೇಕೆಂದು ಬೇಡಿಕೆ ಇಟ್ಟರು.
ಜಿಲ್ಲೆಯಿಂದ ವಿದ್ಯಾಸಿರಿ ಯೋಜನೆ ಫಲಾನುಭವಿ ಸುನೀಲ್ ಮತ್ತು ರಾಘವೇಂದ್ರ ಯು, ಬಸವ ವಸತಿ ಯೋಜನೆ ಫಲಾನುಭವಿ ವಾರಿಜಾ, ಇಂದಿರಾ ಆವಾಸ್ ಯೋಜನೆಯ ಜ್ಯೋತಿ, ಅನ್ನಭಾಗ್ಯ ಯೋಜನೆಯ ಮೊಹಮದ್ ರಫೀಕ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.