ಉಡುಪಿ: ಕಾಪು ಪಡುಗ್ರಾಮದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋಟ್ಸರ್್ ಆ್ಯಂಡ್ ಕಲ್ಚರಲ್ ಕ್ಲಬ್ನ 37ನೇ ವಾರ್ಶಿಕೋತ್ಸವದ ಪ್ರಯುಕ್ತ ಕಾಪು ಪಡು ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೇ 1 ರಿಂದ 3ರ ವರೆಗಿನ ಹೊನಲು ಬೆಳಕಿನ ರಾಜ್ಯಮಟ್ಟದ ಪ್ರತಿಷ್ಠಿತ ಆಹ್ವಾನಿತ ತಂಡಗಳ ಪುರುಷರ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಮಾಜಿ ಶಾಸಕ ಲಾಲಾಜಿ ಮೆಂಡನ್ ಕಾಪು ಪಡು ಶಾಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಬೆಂಗಳೂರು, ಉಡುಪಿ ಜಿಲ್ಲಾ ಕಬಡ್ಡಿ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಸ್ಥೆಯ ಸಹಯೋಗದೊಂದಿಗೆ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದೂ ಲಾಲಾಜಿ ಮೆಂಡನ್ ಹೇಳಿದ್ದಾರೆ.
ಸಾಗರ ಸಂಗಮ-2015 ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯಮಟ್ಟದ ವೃತ್ತಿಪರ ಹಾಗೂ ಪ್ರತಿಷ್ಠಿತ 16 ತಂಡಗಳು ಲೀಗ್ ಆದಾರದಲ್ಲಿ ಸೆಣೆಸಾಟ ನಡೆಸಲಿದೆ. ಪ್ರಥಮ ಬಹುಮಾನವಾಗಿ 1 ಲಕ್ಷ ರೂ ನಗದು ಮತ್ತು ಆತ್ಯಾಕರ್ಶಕ ಟ್ರೋಫಿ ಒಳಗೊಂಡಿದ್ದು, ದ್ವೀತೀಯ ಬಹುಮಾನ 50 ಸಾವಿರ ರೂ ಮತ್ತು ಟ್ರೋಫಿ ಒಳಗೊಂಡಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆಯನ್ನು ನೇರವೇರಿಸಲಿದ್ದು, ಸಮಾರಂಭದಲ್ಲಿ ಪ್ರತಿಷ್ಠಿತ ಗಣ್ಯರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ನವೀನ್ ಅಮೀನ್, ಕಿಶೋರ್ ಕುಮಾರ್, ಕುಶ ಸಾಲ್ಯಾನ್, ಶೀಲಾರಾಜ್ ಪುತ್ರನ್, ರಾಜೇಶ್ ಸುವರ್ಣ ಉಪಸ್ಥಿತರಿದ್ದರು.