ಉಡುಪಿ: ಸೈಂಟ್ ಮೇರಿಸ್ ಹಿ.ಪ್ರಾ.ಶಾಲೆ ದಿ. ವಂ ಡೆನಿಸ್ ಸಿಕ್ವೇರಾರಿಂದ 1940 ರಲ್ಲಿ ಸ್ಥಾಪಿಸಲ್ಪಟ್ಟು, 2015 ರಲ್ಲಿ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಅದರ ಅಮೃತ ಮಹೋತ್ಸವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವು ವಂ ಡಾ ಬ್ಯಾಪ್ಟಿಸ್ಟ್ ಮಿನೇಜಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಕಾರ್ಯಕ್ರಮವನ್ನು ರವಿಶಂಕರ್ ರಾವ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಡುಪಿ ವಲಯ ದೀಪ ಬೆಳಗಿಸಿ ಉದ್ಘಾಟಿಸಿ ವರ್ಶವಿಡಿ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕರೆಯಿತ್ತರು.
ನಗರಸಭೆಯ ಅಧ್ಯಕ್ಷ ಯುವರಾಜ್ ಪಿ ಹಾಗೂ ದಕ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಸಿದರು.
ಉಡುಪಿ ಕೆಥೊಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳಾದ ವಂ ಡಾ ಲಾರೆನ್ಸ್ ಸಿ ಡಿ’ಸೋಜಾರವರು ಶಾಲೆಯು 75 ವರ್ಷ ಮುನ್ನಡೆಯಲು ಸಹಕರಿಸಿದ ಎಲ್ಲರನ್ನೂ ಕೃತಜ್ಞಾತಾಪೂರ್ವಕವಾಗಿ ಸ್ಮರಿಸಿದರು. ಶಿಕ್ಷಣ ಸಂಯೋಜಕರಾದ ಸುರೇಶ್ ಭಟ್ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಮತ್ತು ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಚಾಲಕರಾದ ವಂದನೀಯ ಫ್ರೆಡ್ ಮಸ್ಕರೇನ್ಹಸ್ ಪ್ರಾಸ್ತಾವಿಕ ಭಾಷಣ ಮಾಡಿದರು. ಮುಖ್ಯ ಶಿಕ್ಷಕಿ ಕ್ಲಾರಾ ಮಥಾಯಸ್ ಸ್ವಾಗತಿಸಿದರು. ಶಿಕ್ಷಕ ಹೆರಾಲ್ಡ್ ಆರ್ ಡಿ’ಸೋಜಾ ವಂದಿಸಿದರು. ಶಿಕ್ಷಕಿ ಮರಿಯಾ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.
ಸಹಾಯಕ ಧರ್ಮಗುರು ವಂ ರೋಯ್ಸನ್ ಫೆರ್ನಾಂಡಿಸ್, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿಗಳಾದ ಗ್ರೆಶೀಯನ್ ಭುತೆಲ್ಲೊ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೇಖರ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.