ಉದ್ಯಾವರ: ಈಚರ್ ಲಾರಿ ಮತ್ತು ಬೈಕ್ ನಡುವೆ , ಸವಾರ ಮೃತ್ಯು

Spread the love

ಉದ್ಯಾವರ: ಈಚರ್ ಲಾರಿ ಮತ್ತು ಬೈಕ್ ನಡುವೆ , ಸವಾರ ಮೃತ್ಯು

ಉಡುಪಿ: ಈಚರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಬೈಕ್ ಸವಾರ ಮೃತಪಟ್ಟಘಟನೆ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರ ಬಲಾಯಿಪಾದೆ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮೃತ ಬೈಕ್ ಸವಾರ ಕಾಪು ಸಮೀಪದ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ ಎಂದು ಗುರುತಿಸಲಾಗಿದೆ

ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಏಟಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಧ್ಯರಾತ್ರಿ ಸುಮಾರು 1.30 ರ ಹೊತ್ತಿಗೆ ಪ್ಲೈವುಡ್ ಇತ್ಯಾದಿ ಕೊಂಡೊಯ್ಯುತ್ತಿದ್ದ ಈಚರ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬೈಕನ್ನು ಈಚರ್ ವಾಹನ ಎಳೆದೊಯ್ದಿದ್ದು ಈ ವೇಳೆ ಬೆಂಕಿ ಉಂಟಾಗಿ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments