ಉದ್ಯಾವರ: ನಾಪತ್ತೆಯಾಗಿದ್ದ ಬ್ಯಾಂಕ್ ಉದ್ಯೋಗಿಯ ಮೃತದೇಹ ಹೊಳೆಯಲ್ಲಿ ಪತ್ತೆ
ಉಡುಪಿ : ನಾಪತ್ತೆಯಾಗಿದ್ದ ಬ್ಯಾಂಕ್ ಉದ್ಯೋಗಿ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಪು ತಾಲೂಕಿನ ಉದ್ಯಾವರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಉದ್ಯಾವರ ಬೊಲಾರ್ ಗುಡ್ಡೆ ನಿವಾಸಿ ಸುರೇಶ್ ಪೂಜಾರಿ(57) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಮುಂಬೈಯಲ್ಲಿ ಉದ್ಯೋಗದಲ್ಲಿದ್ದು,ಕಳೆದ ಒಂದ ವರ್ಷಗಳಿಂದ ಉಡುಪಿಯ ಬ್ಯಾಂಕ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಕುಡಿತದ ಚಟ ಹೊಂದಿರುವ ಇವರು ಸರಿಯಾಗಿ ಕೆಲಸಕ್ಕೆ ಹಾಜರಾಗದೆ ಬಳಿಕ ಸ್ವಯಂಪ್ರೇರಿತ ನಿವೃತ್ತಿ ಪಡೆದು ಕಳೆದ ಒಂದು ತಿಂಗಳಿನಿಂದ ಮನೆಯಲ್ಲಿದ್ದರು.
ಜು.4 ರಂದು ಮನೆ ಬಿಟ್ಟು ಹೋದವರು ನಾಪತ್ತೆಯಾಗಿದ್ದರು. ಸೊಮವಾರ ಉದ್ಯಾವರ ಹೊಳೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು,ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ