ಉಳ್ಳಾಲ ಬಾರ್ಜ್ ದುರಂತದ ಎಲ್ಲಾ ನೌಕರರ ರಕ್ಷಣೆ ಮಾಡಿದ ಕೋಸ್ಟ್ ಗಾರ್ಡ್ ಸಿಬಂದಿ
ಮಂಗಳೂರು: ಉಳ್ಳಾಲದ ಮೊಗವೀರ ಪಟ್ಟಣದಲ್ಲಿ ಅರಬ್ಬೀ ಸಮುದ್ರದಲ್ಲಿ ಅಫಘಾತಕ್ಕೀಡಾಗಿದ್ದ ಬಾರ್ಜ್ ನಲ್ಲಿದ್ದ ಎಲ್ಲಾ 27 ನೌಕರನ್ನು ಕರಾವಳಿ ರಕ್ಷಣಾ ಪಡೆದ ಭಾನುವಾರ ರಕ್ಷಿಸಿ ದಡಕ್ಕೆ ತರಲಾಗಿದೆ.
ಈ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವ ಯು ಟಿ ಖಾದರ್ ಕಡಲ್ಕೊರೆತ ತಡೆಗೋಡೆ ಕಾಮಗಾರಿ ನಡೆಸುತ್ತಿದ್ದ ಚೀನಾ ಮೂಲದ ಕಂಪೆನಿಯ ಬಾರ್ಜ್ ನಲ್ಲಿ ಸುಮಾರು 27 ಮಂದಿ ನೌಕರರಿದ್ದು ನಿನ್ನೆ 4 ಮಂದಿಯನ್ನು ರಕ್ಷಿಸಲಾಗಿತ್ತು. ಸಮುದ್ರದ ಪ್ರಕ್ಷುಬ್ದತೆಯ ಪರಿಣಾಮ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಭಾನುವಾರ ಮುಂಜಾನೆ ಕೋಸ್ಟ್ ಗಾರ್ಡ್ ಸಿಬಂದಿಗಳು ಮತ್ತೆ ಕಾರ್ಯಾಚರಣೆ ಆರಂಬಿಸಿ ಉಳಿದ ಎಲ್ಲರನ್ನೂ ರಕ್ಷಿಸಲಾಗಿದೆ ಎಂದಿದ್ದಾರೆ.
ಉಳ್ಳಾಲ ಸಮೀಪದ ಮೊಗವೀರಪಟ್ಣದಲ್ಲಿ ಶನಿವಾರ ನಡೆದ ಬಾರ್ಜ್ ದುರಂತದ ಬಗ್ಗೆ ಕ್ಷಿಪ್ರ ಕ್ರಮ ಕೈಗೊಂಡಿರುವ ಸ್ಥಳೀಯ ಶಾಸಕರು ಹಾಗೂ ರಾಜ್ಯ ಆಹಾರ ಸಚಿವರಾದ ಯು.ಟಿ.ಖಾದರ್ ಬೆಳ್ಳಂಬೆಳಗ್ಗೆ ಪಣಂಬೂರು ಕೋಸ್ಟ್ ಗಾರ್ಡ್ ಗೆ ತೆರಳಿ ಅಧಿಕಾರಿಗಳಿಗೆ ಇನ್ನಷ್ಟು ಚುರುಕು ಮುಟ್ಟಿಸಿದ್ದರು ಬಳಿಕ ಬ್ರಿಟಿಷ್ ಕಂಪೆನಿಯ ದುಬಾರಿ ಎ.ಸಿ.ವಿ. (Air Cutpon Vesel) ಓವರ್ ಕ್ರಾಫ್ಟ್ ಬೋಟನ್ನು ಇದೀಗ ಬೆಳಗ್ಗಿನಿಂದ ಕಾರ್ಯಾಚರಣೆಗೆ ಇಳಿಸಲಾಗಿದ್ದು. 50 ಮಂದಿ ಕೋಸ್ಟ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುವುದರ ಮೂಲಕ ನೌಕರರನ್ನು ರಕ್ಷಿಸಲಾಗಿದೆ ಎಂದರು.
ಮೈಸೂರು ಕಾರ್ಯಕ್ರಮ ಮುಗಿಸಿ ಮಧ್ಯರಾತ್ರಿ 3 ಗಂಟೆಗೆ ಮಂಗಳೂರು ತಲುಪಿರುವ ಸಚಿವ ಖಾದರ್ ಆ ನಂತರ ರಂಝಾನ್ ಉಪವಾಸದ ಸಹರಿ ಸೇವಿಸಿ ಮಸೀದಿಯಲ್ಲಿ ಭಾನುವಾರ ಬೆಳಗ್ಗಿನ ನಮಾಝ್ ಮುಗಿಸಿ ಬಾರ್ಜ್ ದುರಂತದಲ್ಲಿ ಸಿಲುಕಿರುವವರ ರಕ್ಷಣೆಗೆ ವಿಶೇಷ ಪ್ರಾರ್ಥನೆ ನಡೆಸಿದರು. ಬಳಿಕ ನೇರವಾಗಿ ಪಣಂಬೂರು ಕೋಸ್ಟ್ ಗಾರ್ಡ್ ಕಛೇರಿಗೆ ತೆರಳಿ ಕಾರ್ಯಾಚರಣೆ ತಂಡದೊಂದಿಗೆ ಕ್ರಿಯಾಶೀಲರಾಗಿದ್ದರು