Home Mangalorean News Kannada News ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

Spread the love

ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

ಮಂಗಳೂರು: ದೇರಳಕಟ್ಟೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಮಂಗಳೂರು  ಸಿಸಿಬಿ ಪೊಲೀಸರು ಬಂಧಿಸಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ ವಸ್ತುಗಳ ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಈಗಾಗಲೇ ಒಟ್ಟು 7 ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿವೆ.


ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಜೀಜ್ (42) ಬಂಧಿತ ಆರೋಪಿ.

ಈತನಿಂದ 26 ಗ್ರಾಂ ತೂಕದ 1 ಲಕ್ಷ 30 ಸಾವಿರ ಮೌಲ್ಯದ MDMA, ಮಾದಕವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಸೇರಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಲಾಗಿದೆ.

 


Spread the love

Exit mobile version