ಎಲ್ಲಾ ಅತೃಪ್ತ ಶಾಸಕರನ್ನೂ ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್!
ಬೆಂಗಳೂರು: ನಿರೀಕ್ಷೆಯಂತೆಯೇ ಮುಂಬೈಗೆ ಹಾರಿರುವ ಎಲ್ಲ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕ್ ನೀಡಿದ್ದು, ಅವರ ಶಾಸಕತ್ವ ಅನರ್ಹಗೊಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಶಾಸಕರನ್ನು ಅನರ್ಹಗೊಳಿಸಿದ್ದಾರೆ.
ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ನೀಡಿದರು.