ಎಸ್.ಎಸ್.ಎಲ್.ಸಿ ಪರೀಕ್ಷೆ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ:, ಪೋಷಕರು ಅತಂಕ ಪಡುವ ಅಗತ್ಯವಿಲ್ಲ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ನಂತರ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಗುವುದು, ಪ್ರತೀ ವಿದ್ಯಾರ್ಥಿಗಾಗಿ ಶಿಕ್ಷಣ ಇಲಾಖೆಯಿಂದ ಸ್ಯಾನಿಟೈಸ್ ಗಳ ಪೂರೈಕೆಯಾಗಿದ್ದು, ಪ್ರತೀ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್ ಗಳನ್ನು ವಿತರಿಸಲಾಗುತ್ತಿದೆ.
ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರದೊAದಿಗೆ ಪ್ರವೇಶ ನೀಡಲು , ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕಾö್ಯನರ್ ಮೂಲಕ ಪರೀಕ್ಷಿಸಲು ಕ್ರಮ ಕೈಗೊಂಡಿದ್ದು, 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕಾö್ಯನರ್ ವ್ಯವಸ್ಥೆ ಮಾಡಲಾಗಿದೆ, ಕೊಠಡಿಯಲ್ಲಿ 18 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ, ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಒದಗಿಸಲು ರೂಟ್ ಮ್ಯಾಪ್ ಸಿದ್ದಪಡಿಸಲಾಗುತ್ತಿದ್ದು, ಪ್ರತೀ ರೂಟ್ ಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದ್ದು, ಯಾವುದೇ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗುವುದರಿಂದ ವಂಚಿತನಾದAತೆ , ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿದ್ದಲ್ಲಿ ಶಿಕ್ಷಣ ಇಲಾಖೆಯ ಸಹಾಯವಾಣಿಯನ್ನು ಸಂಪರ್ಕಿಸಿ , ಖಚಿತ ಮಾಹಿತಿ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆಯ ಅನುಕೂಲವಾಗುವಂತೆ ಖಾಸಗಿ , ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಶಾಲೆಗಳ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಖಾಸಗಿ ಬಸ್ ಮಾಲೀಕರ ಸಂಘದಿAದ ಅಗತ್ಯ ಸಹಕಾರ ಪಡೆಯಲಾಗಿದೆ.
ವಿದ್ಯಾರ್ಥಿಗಳು ಮನೆಯಿಂದಲೇ ಕುದಿಸಿ ಆರಿಸಿದ ಕುಡಿಯುವ ನೀರು ತರುವಂತೆ ತಿಳಿಸಿರುವ ಜಿಲ್ಲಾಧಿಕಾರಿಗಳು , ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕಾö್ಯನರ್ ಮೂಲಕ ಪರಿಶೀಲಿಸಿ, ಪರೀಕ್ಷಾ ಕೇಂದ್ರದೊಳಗೆ ಬಿಡಬೇಕಾಗಿರುವುದರಿಂದ ಆದಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ತಿಳಿಸಿದ್ದು, ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸಿಕೊಂಡು, ಪರೀಕ್ಷಾ ವಿಧಾನಗಳಿಗೆ ಯಾವುದೇ ಚ್ಯುತಿ ಬಾರದಂತೆ , ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಎಲ್ಲಾ ಅಧಿಕಾರಿಗಳು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಡಿಸಿ ಜಿ.ಜಗದೀಶ್ ತಿಳಿಸಿದ್ದಾರೆ.