ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ ದ್ವಿತೀಯ
ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಶಿವಮೊಗ್ಗ, ಕೊಡಗು ತೃತೀಯ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆ 92.12%, ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ರಷ್ಟಿದೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ. ಅಂಕಿತಾ ಬಸಪ್ಪ ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆ 18ನೇ ಸ್ಥಾನ ಪಡೆದಿದ್ದು, ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ, ಜಿಲ್ಲೆಗಳ ಶೇಖಡಾವಾರು ಫಲಿತಾಂಶ ಇಂತಿದೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.