ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ, ಆರೋಪಿ ವಶಕ್ಕೆ
ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯೊಬ್ಬ ಆ್ಯಸಿಡ್ ದಾಳಿ ಮಾಡಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರನ್ನು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಮೇಲೆ ಕೇರಳ ಮೂಲದ ವಿದ್ಯಾರ್ಥಿ ಅಬಿನ್ ಅ್ಯಸಿಡ್ ದಾಳಿ ನಡೆಸಿದ್ದು ವಿದ್ಯಾರ್ಥಿನಿಗೆ ಸುಟ್ಟ ಗಾಯಗಳಾಗಿದ್ದು ಆಕೆಯ ಪಕ್ಕದಲ್ಲಿ ಕುಳಿತ ಇನ್ನಿಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ
ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.