ಕಬಾಬ್ ಅಂಗಡಿಯಲ್ಲಿ ಗಾಂಜಾ ಮಾರಾಟಕ್ಕಿಟ್ಟ ಇಬ್ಬರನ್ನು ಬಂಧಿಸಿದ ಡಿಸಿಐಬಿ ಪೊಲೀಸರು
ಕುಂದಾಪುರ: ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಡಿಸಿಐಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತರನ್ನು ಮಹಮ್ಮದ್ ತನ್ವೀರ್ (36) ಮತ್ತು ಸಬೀಬ್ (25) ಎಂದು ಗುರುತಿಸಲಾಗಿದೆ.
ಕುಂದಾಪುರ ತಾಲೂಕು ಬನ್ನೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ಮಾಹಿತಿ ಮೇರೆಗೆ , ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ದಾಳಿ ನಡೆಸಿ 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಂಡು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ಸುಮಾರು 25,000/- ರೂಪಾಯಿ ಆಗಬಹುದು.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್. ಐ.ಪಿ.ಎಸ್. ರವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಕೆ.ಎಸ್.ಪಿ.ಎಸ್. ಹಾಗೂ ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ರವರು ಹಾಗೂ .ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸಂತೋಷ ಕುಂದರ್, ಸುರೇಶ, ರಾಜ್ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ರವರು ಸಹಕರಿಸುತ್ತಾರೆ.