ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯ ಸಂಚಾರಿ ಪೀಠ| ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಸ್ಪಷ್ಟನೆ
ಮಂಗಳೂರು: ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮುಖ್ಯ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯ ಸಂಚಾರಿ ಪೀಠ ಸ್ಥಾಪನೆ ಬೇಡಿಕೆಯ ವಿಚಾರಕ್ಕೆ ಸಂಬಂಧಿಸಿ ಕಾನೂನು ಇಲಾಖೆ ಕೈಗೊಂಡ ಕ್ರಮದ ಬಗ್ಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಕೇಳಿರುವ ಪ್ರಶ್ನೆಗೆ ವಿಧಾನ ಪರಿಷತ್‌ನಲ್ಲಿ ಮುಖ್ಯ ಮಂತ್ರಿ ಉತ್ತರ ನೀಡಿದ್ದಾರೆ.
ಸರಕಾರದ ರಾಜ್ಯ ಪುನರ್ ವಿಂಗಡನಾ ಕಾಯ್ದೆ 1956 ಕಲಂ 51ರನ್ವಯ, ಆಯಾ ರಾಜ್ಯಗಳ ಉಚ್ಛ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳು ರಾಜ್ಯಪಾಲರ ಅನುಮೋದನೆಯೊಂದಿಗೆ ರಾಜ್ಯದ ಇತರ ಯಾವುದೇ ಸ್ಥಳದಲ್ಲಿ ಸಂಚಾರಿ ಪೀಠವನ್ನು ವ್ಯವಸ್ಥೆಗೊಳಿಸಲು(ಸಿಟ್ಟಿಂಗ್) ಅಧಿಕಾರ ಹೊಂದಿರುತ್ತಾರೆ. ಪ್ರಸ್ತುತ ಈ ಕುರಿತು ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.