ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ-ಯು ಟಿ ಖಾದರ್
ಮಂಗಳೂರು: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಯು ಟಿ ಖಾದರ್ ಅವರಂತಹ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪ್ರತಿಭಟನೆಗೆ ಕಿಚ್ಚು ಹಚ್ಚುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಆರೋಪಕ್ಕೆ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ.CAB ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ.ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ.(1)
— UT Khadér (@utkhader) December 19, 2019
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ ಎಂದಿದ್ದಾರೆ. ಸಿಎಎ ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ.ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ ಎಂದು ಅವರು ಸರ್ಕಾರಕ್ಕೆ ಮತ್ತು ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ.
ಹೊಸ ಕಾನೂನು ಹುಟ್ಟು ಹಾಕಿ ಉತ್ತರದ ರಾಜ್ಯಗಳಿಗೆ ಬೆಂಕಿ ಇಟ್ಟಿದ್ದೀರ.ಇದರ ನಡುವೆ ಆರ್ಥಿಕತೆ ಕುಸಿತದ ಕಥೆ ಎಲ್ಲಿಗೆ ಬಂತು? ಇದರಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಹೊಸ ಹೊಸ ಕಾನೂನು ಮಾಡುತ್ತಿದೆ ಎಂದು ಟೀಕಿಸಿದರು.