ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ‘ಗಾಂಧಿ ಸ್ಮøತಿ’ ಕಾರ್ಯಕ್ರಮ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜನವರಿ 30 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿಯ ಸ್ಮರಣಾರ್ಥ ‘ಗಾಂಧಿ ಸ್ಮøತಿ’ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಅಕಾಡೆಮಿಯು ಮಹಾತ್ಮ ಗಾಂಧೀಜಿಯ ಬಗ್ಗೆ ಮುದ್ರಿಸಿದ ‘ಮನ್ಯಾನಂಸ್ರಾಚೊ ಮಹಾನ್ ಉಜ್ವಾಡ್- ಮಹಾತ್ಮ ಗಾಂಧೀಜಿ’ ಪುಸ್ತಕವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಲ್.ಧರ್ಮ ಬಿಡುಗಡೆ ಮಾಡಲಿದ್ದಾರೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.