Home Mangalorean News Kannada News ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ; ಅಮಿತ್ ಶಾ ವಿಶ್ವಾಸ

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ; ಅಮಿತ್ ಶಾ ವಿಶ್ವಾಸ

Spread the love

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ; ಅಮಿತ್ ಶಾ ವಿಶ್ವಾಸ

ಸುಬ್ರಹ್ಮಣ್ಯ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ದಕ್ಷಿಣ ಭಾರತದಲ್ಲಿ ಪಕ್ಷದ ಗೆಲುವಿಗೆ ಹೆಬ್ಬಗಿಲು ತೆರೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ್ದ ನವ ಶಕ್ತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಸಿದ್ದರಾಮಯ್ಯ ಸರಕಾರ ಭ್ರಷ್ಠಾಚಾರದಿಂದ ಕೂಡಿದ್ದು, ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಶಾಸಕ ಹ್ಯಾರಿಸ್ ಪುತ್ರನ ವರ್ತನೆಯನ್ನು ಪ್ರಸ್ತಾಪಿಸಿದ ಅಮಿತ್ ಶಾ ಸರಕಾರದ ತುಷ್ಟಿಕರಣಕ್ಕೆ ತಾಜಾ ಉದಾಹರಣೆ ಎಂದರು.

ಕೇಂದ್ರ ಸರಕಾರ ಕರ್ನಾಟಕಕ್ಕೆ ನೀಡಿರುವ ಅನುದಾನದ ಲೆಕ್ಕ ಕೇಳಿದ ಅಮಿತ್ ಶಾ ಕೇಂದ್ರ ಸರಕಾರ ಏನು ಅಭಿವೃದ್ದಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ಸಿಸುತ್ತಾರೆ ಆದರೆ ಸಿದ್ದರಾಮಯ್ಯ ಸರಕಾರ ರಾಜ್ಯದ ಜನರಿಗೆ ಏನು ಮಾಡಿದೆ ಎಂದು ಪ್ರಶ್ನಿಸುವ ಕಾಲ ಬಂದಿದೆ ಎಂದರು.

2018ರ ಚುನಾವಣೆ ಕೇವಲ ಕರ್ನಾಟಕ್ಕೆ ಸೀಮಿತವಾಗಿಲ್ಲ. ಈ ಚುನಾವಣೆ ಗೆದ್ದು ದಕ್ಷಿಣ ಭಾರತದಲ್ಲಿ ಕಮಲ ಅರಳಬೇಕಾಗಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಹಾರಾಷ್ಟ್ರ, ಹರಿಯಾಣ, ಜಾರ್ಖಾಂಡ್, ಕಾಶ್ಮೀರ, ಅಸ್ಸಾಂ, ಮಣಿಪುರ, ಗೋವಾ, ಗುಜರಾತ್, ಉತ್ತರಖಾಂಡ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೋಗಿ ಬಿಜೆಪಿ‌ ಬಂದಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಹೋಗಿ ಕಮಲ ಅರಳಬೇಕಾಗಿದೆ ಎಂದು ಹೇಳಿದರು.


Spread the love

Exit mobile version