Home Mangalorean News Kannada News ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

Spread the love

ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಎನ್ನುವರನ್ನು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ  ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಮೊಟ್ಟೆ ವಿಡಿಯೋ ಅಪ್ಲೋಡ್‌ ಮಾಡಲಾಗಿತ್ತು. ಈ ಸಂಬಂಧ ಈ ಸಂಬಂಧ ಬುಧವಾರವಷ್ಟೇ (ಮೇ 8) ಕಾಂಗ್ರೆಸ್​ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆದ್ರೆ, ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ. ಹೀಗಾಗಿ ಜಾಮೀನು ಪ್ರಕ್ರಿಯೆ ಹಾಗೂ ಪ್ರಶಾಂತ್ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ.

 


Spread the love

Exit mobile version