ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್ ಮಾತೃಪಕ್ಷ ಬಿಜೆಪಿಗೆ ಘರ್ ವಾಪಸಿ
ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.