ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

Spread the love

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ನಂದಾವರ ದೇವಸ್ಥಾನ ಭೇಟಿ

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರು ಇಂದು ನಂದಾವರ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎ.ಸಿ.ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ತುಂಬೆ, ಎ.ಪಿ.ಯಂ.ಸಿ ಅಧ್ಯಕ್ಷ ಪದ್ಮನಾಭ ರೈ, ಯುವಕಾಂಗ್ರೆಸ್ ಮುಖಂಡ ಲುಕ್ಮಾನ್, ಸಂಜೀವ ಪೂಜಾರಿ , ರಿಯಾಜ್ ಬಂಟ್ವಾಳ್ ಹಾಗೂ ದೇವಸ್ಥಾನದ ಟ್ರಸ್ಥಿಗಳು ಉಪಸ್ಥಿತರಿದ್ದರು.


Spread the love