ಕಾಪು ಬಳಿ ಡಿವೈಡರ್ ಹಾರಿ ಬಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು: ಸವಾರ ಸಾವು

Spread the love

ಕಾಪು ಬಳಿ ಡಿವೈಡರ್ ಹಾರಿ ಬಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಕಾರು: ಸವಾರ ಸಾವು

ಕಾಪು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿಕೊಂಡು ಬಂದ ಇನ್ನೋವಾ ಕಾರೊಂದು ರಸ್ತೆಯ ಇನ್ನೊಂದು ಭಾಗದಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ದ್ವಿಚಕ್ರ ವಾಹನ ಸವಾರ ಕುತ್ಪಾಡಿ ಕಟ್ಟೆಗುಡ್ಡೆ ನಿವಾಸಿ ಸುಧಾಕರ್ (45) ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಕಾಪುವಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಪಾಂಗಾಳ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಮೇಲಿಂದ ಹಾರಿ ಬಂದು ಮತ್ತೊಂದು ಬದಿಯ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕಾರು ರಸ್ತೆ ಪಕ್ಕದಲ್ಲಿ ಪಲ್ಟಿ ಹೊಡೆದಿದೆ. ಅಫಘಾತದ ಪರಿಣಾಮ ದ್ವಿಚಕ್ರ ವಾಹನ ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love